Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:2 - ಪರಿಶುದ್ದ ಬೈಬಲ್‌

2 ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:2
15 ತಿಳಿವುಗಳ ಹೋಲಿಕೆ  

ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


“‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.”


ಯೆಹೂದದ ಜನರಿಗೆ ರಬ್ಬಾ ಮತ್ತು ಕಿರ್ಯತ್ಯಾರೀಮ್ ಎಂದು ಕರೆಯಲ್ಪಡುವ ಕಿರ್ಯತ್‌ಬಾಳ್ ಎಂಬ ಎರಡು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಸಹ ಕೊಡಲಾಯಿತು.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು