Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:20 - ಪರಿಶುದ್ದ ಬೈಬಲ್‌

20 ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:20
23 ತಿಳಿವುಗಳ ಹೋಲಿಕೆ  

ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.


ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.


ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.


ಅಯೋಗ್ಯರಾಗಿದ್ದ ಈ ಗುಂಪಿನವರು ದೇಶಭ್ರಷ್ಟರಾಗಿದ್ದರು.


ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.


ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಯೇಸು ಸೀಮೋನ್ ಪೇತ್ರನ ಬಳಿಗೆ ಬಂದಾಗ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ನೀನು ತೊಳೆಯಕೂಡದು” ಎಂದನು.


ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು.


ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.


ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನು ಸೌಲನಿಗೆ ಜನರು ತಿಳಿಸಿದರು. ಸೌಲನಿಗೆ ಇದು ಸಂತಸವನ್ನು ಉಂಟುಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು