2 ಸಮುಯೇಲ 6:22 - ಪರಿಶುದ್ದ ಬೈಬಲ್22 ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು. ಅಧ್ಯಾಯವನ್ನು ನೋಡಿ |