2 ಸಮುಯೇಲ 6:5 - ಪರಿಶುದ್ದ ಬೈಬಲ್5 ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು. ಅಧ್ಯಾಯವನ್ನು ನೋಡಿ |
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.