Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:10 - ಪರಿಶುದ್ದ ಬೈಬಲ್‌

10-11 ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:10
25 ತಿಳಿವುಗಳ ಹೋಲಿಕೆ  

ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.


ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.


ಇನ್ನೊಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಬಹುದು.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.


ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದ್ದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಫ್ರದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”


ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು