Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:12 - ಪರಿಶುದ್ದ ಬೈಬಲ್‌

12 “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:12
36 ತಿಳಿವುಗಳ ಹೋಲಿಕೆ  

ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.


“ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.


ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ,


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.


ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.


ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ.


ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ಇವರೆಲ್ಲಾ ದೇವಾಲಯದಲ್ಲಿ ರಾಜನೊಂದಿಗೆ ಒಪ್ಪಂದವನ್ನು ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತತಿಯವರಿಗೆ ಮಾಡಿದ ವಾಗ್ದಾನದ ಪ್ರಕಾರ ಅರಸನಾಗತಕ್ಕವನು ಇವನೇ.


ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನ ಸ್ವಂತ ಮಗನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು’ ಎಂದು ಹೇಳಿದನು.


ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.


ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು