Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:16 - ಪರಿಶುದ್ದ ಬೈಬಲ್‌

16 ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:16
29 ತಿಳಿವುಗಳ ಹೋಲಿಕೆ  

ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.


ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಆ ದರ್ಶನದಲ್ಲಿ ದೇವರು ತನಗೆ ಹೇಳಿದ ಪ್ರತಿಯೊಂದನ್ನು ನಾತಾನನು ದಾವೀದನಿಗೆ ತಿಳಿಸಿದನು.


ನೀನು ಅವುಗಳನ್ನೆಲ್ಲಾ ಕೈಕೊಂಡು ನಡೆದರೆ ಯಾವಾಗಲೂ ನಿನ್ನ ಕುಟುಂಬದ ಯಾವನಾದರೊಬ್ಬನು ಇಸ್ರೇಲಿನ ರಾಜನಾಗಿರುತ್ತಾನೆಂದು ನಾನು ನಿನಗೆ ವಾಗ್ದಾನ ಮಾಡುತ್ತೇನೆ. ನಿನ್ನ ತಂದೆಯಾದ ದಾವೀದನಿಗೆ ನಾನು ಈ ವಾಗ್ದಾನವನ್ನು ಮಾಡಿದ್ದೆನು. ಯಾವಾಗಲೂ ಅವನ ಸಂತತಿಯವರಲ್ಲಿ ಯಾವನಾದರೊಬ್ಬನು ಇಸ್ರೇಲನ್ನು ಆಳುತ್ತಾನೆಂದು ನಾನು ಅವನಿಗೆ ಹೇಳಿದ್ದೆನು.


‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”


“‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.


ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.


ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು