ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.
ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.
ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”
ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.