2 ಸಮುಯೇಲ 7:21 - ಪರಿಶುದ್ದ ಬೈಬಲ್21 ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವದಕ್ಕೋಸ್ಕರ ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ಅವುಗಳ ಅನುಭವವನ್ನು ನಿನ್ನ ಸೇವಕನಿಗೆ ಉಂಟುಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ. ಅಧ್ಯಾಯವನ್ನು ನೋಡಿ |
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.