2 ಸಮುಯೇಲ 7:27 - ಪರಿಶುದ್ದ ಬೈಬಲ್27 “ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್‍ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೋಸ್ಕರ ಮನೆ ಕಟ್ಟುವೆನೆಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು. ಅಧ್ಯಾಯವನ್ನು ನೋಡಿ |
ನಾನು ಇದರ ಬಗ್ಗೆ ನಿನಗೆ ಈ ಜನರ ಸಮ್ಮುಖದಲ್ಲಿ ಮತ್ತು ನಮ್ಮ ಹಿರಿಯರ ಸಮ್ಮುಖದಲ್ಲಿ ಹೇಳಬೇಕೆಂದು ತೀರ್ಮಾನಿಸಿದ್ದೇನೆ. ನೀನು ಆ ಹೊಲವನ್ನು ಕೊಂಡುಕೊಳ್ಳ ಬಯಸಿದರೆ ಕೊಂಡುಕೋ. ನಿನಗೆ ಕೊಂಡುಕೊಳ್ಳಲು ಇಷ್ಟವಿಲ್ಲದಿದ್ದರೆ ನನಗೆ ಹೇಳು. ನಿನ್ನ ಬಳಿಕ ಆ ಹೊಲವನ್ನು ಕೊಂಡುಕೊಳ್ಳುವ ಹಕ್ಕು ನನಗಿದೆ. ನೀನು ಆ ಹೊಲವನ್ನು ಕೊಂಡುಕೊಳ್ಳದಿದ್ದರೆ ನಾನು ಕೊಂಡುಕೊಳ್ಳುತ್ತೇನೆ.” ಅದಕ್ಕೆ ಅವನು, “ಸರಿ, ನಾನೇ ಕೊಂಡುಕೊಳ್ಳುತ್ತೇನೆ.” ಎಂದನು.