2 ಸಮುಯೇಲ 7:3 - ಪರಿಶುದ್ದ ಬೈಬಲ್3 ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.