Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:5 - ಪರಿಶುದ್ದ ಬೈಬಲ್‌

5 “ನೀನು ನನ್ನ ಸೇವಕನಾದ ದಾವೀದನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸು: ‘ನನ್ನ ವಾಸಕ್ಕಾಗಿ ಆಲಯವನ್ನು ಕಟ್ಟುವ ವ್ಯಕ್ತಿಯು ನೀನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:5
11 ತಿಳಿವುಗಳ ಹೋಲಿಕೆ  

ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ.


ಆದರೆ ಅಂದು ರಾತ್ರಿ ನಾತಾನನಿಗೆ ಯೆಹೋವನು ಹೀಗೆ ಹೇಳಿದನು:


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ರಾಜನಾದ ಸೊಲೊಮೋನನು ದೇವಾಲಯದ ಅಡಿಪಾಯಕ್ಕಾಗಿ ದೊಡ್ಡದಾದ ಹಾಗೂ ಬೆಲೆಬಾಳುವ ಕಲ್ಲುಗಳನ್ನು ಕೊರೆದು ತೆಗೆಯಲು ಆಜ್ಞಾಪಿಸಿದನು. ಈ ಕಲ್ಲುಗಳನ್ನು ಬಹು ಜಾಗರೂಕತೆಯಿಂದ ಕತ್ತರಿಸಿ ತೆಗೆದರು.


ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.


ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು