2 ಸಮುಯೇಲ 7:8 - ಪರಿಶುದ್ದ ಬೈಬಲ್8 “ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.