2 ಸಮುಯೇಲ 8:12 - ಪರಿಶುದ್ದ ಬೈಬಲ್12 ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪಡಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು. ಅಧ್ಯಾಯವನ್ನು ನೋಡಿ |