Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:13 - ಪರಿಶುದ್ದ ಬೈಬಲ್‌

13 ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:13
7 ತಿಳಿವುಗಳ ಹೋಲಿಕೆ  

ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.


ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.


ಅಮಚ್ಯನು ಧೈರ್ಯಗೊಂಡು ತನ್ನ ಸೈನ್ಯವನ್ನು ಎದೋಮ್ ರಾಜ್ಯದ ಉಪ್ಪಿನ ಕಣಿವೆಗೆ ನಡಿಸಿದನು. ಆ ಸ್ಥಳದಲ್ಲಿ ಅವನ ಸೈನಿಕರು ಸೇಯೀರಿನ ಹತ್ತು ಸಾವಿರ ಮಂದಿಯನ್ನು ಕೊಂದರು.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು