2 ಸಮುಯೇಲ 8:17 - ಪರಿಶುದ್ದ ಬೈಬಲ್17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.