2 ಸಮುಯೇಲ 8:18 - ಪರಿಶುದ್ದ ಬೈಬಲ್18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.