Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:6 - ಪರಿಶುದ್ದ ಬೈಬಲ್‌

6 ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:6
26 ತಿಳಿವುಗಳ ಹೋಲಿಕೆ  

ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.


ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.


ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.


ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.


ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೆತ್ಲೆಹೇಮಿನಲ್ಲಿದ್ದರು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.


ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.


ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು.


ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.


ಅಹಾಬನು ಸತ್ತನಂತರ, ಮೋವಾಬ್ಯರು ಇಸ್ರೇಲಿನ ಆಳ್ವಿಕೆಗೆ ವಿರೋಧವಾಗಿ ದಂಗೆ ಎದ್ದರು.


ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)


ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು