Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:10 - ಪರಿಶುದ್ದ ಬೈಬಲ್‌

10 ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೂ ನಿನ್ನ ಮಕ್ಕಳೂ ಆಳುಗಳೂ ನಿನ್ನ ಯಜಮಾನನ ಮೊಮ್ಮಗನಿಗಾಗಿ ಆ ಭೂಮಿಯನ್ನು ವ್ಯವಸಾಯಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲೇ ಭೋಜನವಾಗುವುದು,” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಆಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:10
10 ತಿಳಿವುಗಳ ಹೋಲಿಕೆ  

ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.


ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.


ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.


ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕೆಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.


ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.


ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು.


ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು