2 ಸಮುಯೇಲ 9:11 - ಪರಿಶುದ್ದ ಬೈಬಲ್11 ಚೀಬನು ರಾಜನಾದ ದಾವೀದನಿಗೆ, “ನಾನು ನಿನ್ನ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೀಬನು ಅರಸನಿಗೆ, “ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೀಬನು ಅರಸನಿಗೆ - ಒಡೆಯನಾದ ಅರಸನ ಅಪ್ಪಣೆಯಂತೆ ಸೇವಕನು ನಡೆಯುವನು ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು. ಅಧ್ಯಾಯವನ್ನು ನೋಡಿ |
ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.