2 ಸಮುಯೇಲ 9:13 - ಪರಿಶುದ್ದ ಬೈಬಲ್13 ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದದರಿಂದ ಅವನು ಯೆರೂಸಲೇವಿುನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು. ಅಧ್ಯಾಯವನ್ನು ನೋಡಿ |
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.