Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:7 - ಪರಿಶುದ್ದ ಬೈಬಲ್‌

7 ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:7
32 ತಿಳಿವುಗಳ ಹೋಲಿಕೆ  

ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.


“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.


ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.


ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ದಾವೀದನು ಬರ್ಜಿಲ್ಲೈಯನಿಗೆ, “ನದಿಯನ್ನು ದಾಟಿ ನನ್ನೊಂದಿಗೆ ಆಚೇದಡಕ್ಕೆ ಬಾ. ನೀನು ಜೆರುಸಲೇಮಿನಲ್ಲಿ ನನ್ನೊಂದಿಗೆ ವಾಸಿಸುವುದಾದರೆ, ನಾನು ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದು ಹೇಳಿದನು.


ಚೀಬನು ರಾಜನಾದ ದಾವೀದನಿಗೆ, “ನಾನು ನಿನ್ನ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.


ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.


ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.


ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.


ನನ್ನ ಕುಟುಂಬದ ಮೇಲೆ ಶಾಶ್ವತವಾಗಿ ನಿನ್ನ ದಯೆಯಿರಲಿ. ಭೂಮಿಯ ಮೇಲಿರುವ ನಿನ್ನ ಶತ್ರುಗಳೆಲ್ಲರನ್ನೂ ಯೆಹೋವನು ನಾಶಪಡಿಸುತ್ತಾನೆ.


ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.


ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.


ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು