Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:8 - ಪರಿಶುದ್ದ ಬೈಬಲ್‌

8 ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:8
7 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯ ತಲೆಯನ್ನು ಕತ್ತರಿಸಿಹಾಕುತ್ತೇನೆ, ನನಗೆ ಅಪ್ಪಣೆಕೊಡು” ಎಂದನು.


ಈಷ್ಬೋಶೆತನ ಮಾತುಗಳಿಂದ ಅಬ್ನೇರನು ಬಹಳ ಕೋಪಗೊಂಡನು. ಅಬ್ನೇರನು, “ನಾನು ಸೌಲನಿಗೂ ಅವನ ವಂಶದವರಿಗೂ ನಂಬಿಗಸ್ತನಾಗಿದ್ದೆನು. ನಾನು ನಿನ್ನನ್ನು ದಾವೀದನಿಗೆ ಒಪ್ಪಿಸಲಿಲ್ಲ ಹಾಗೂ ಅವನಿಂದ ನೀನು ಸೋಲುವಂತೆ ಮಾಡಲಿಲ್ಲ. ನಾನು ಯೆಹೂದಕ್ಕಾಗಿ ಕೆಲಸ ಮಾಡುವ ದ್ರೋಹಿಯಲ್ಲ. ಆದರೆ ಈಗ ನಾನು ಇಂತಹ ಕೆಟ್ಟ ಕೆಲಸವನ್ನು ಮಾಡಿದೆನೆಂದು ಹೇಳುತ್ತಿರುವೆ.


ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು