10 ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
10 ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.
10 ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.
10 ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;
10 ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”
ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.
ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.
ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.
ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.