Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:14 - ಪರಿಶುದ್ದ ಬೈಬಲ್‌

14 ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ಮಾತಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಲಗ್ಗುನಾ ಮಿಯಾ ತುಜ್ಯಾಕ್ಡೆ ಯೆತಾ ಮನುನ್ ಮಿಯಾ ಬರೊಸೊ ಕರ್ತಾ; ತನ್ನಾ ಅಮಿ ದೊಗೆ ಜಾನಾ ಮಿಳುನ್ ಬೊಲುವ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:14
10 ತಿಳಿವುಗಳ ಹೋಲಿಕೆ  

ನೀವು ಭೇಟಿ ಮಾಡಿದಾಗ ಒಬ್ಬರಿಗೊಬ್ಬರು ಪ್ರೀತಿಯ ಮುದ್ದನ್ನು ನೀಡಿರಿ. ಕ್ರಿಸ್ತನಲ್ಲಿರುವ ನಿಮಗೆಲ್ಲರಿಗೂ ಶಾಂತಿಯಿರಲಿ.


ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.


ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು,


ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.


ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.


ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು