3 ಯೋಹಾನನು 1:3 - ಪರಿಶುದ್ದ ಬೈಬಲ್3 ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ತಿಳಿಸಿ ನೀನು ಸತ್ಯವಂತನಾಗಿ ನಡೆಯುವವನು ಎಂದು ಹೇಳುವಾಗ ನಾನು ಬಹಳ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಜ್ಯಾ ಜಿವನಾತ್ಲಿ ಖರೆಪಾನ್ ಅನಿ ತಿಯಾ ಖರ್ಯಾ ವಾಟೆನ್ ಚಲುಲಾಗ್ಲೆಯ್ ಮನುನ್ ಕ್ರಿಸ್ತಾಕ್ಡೆ ಭಾವ್ ಹೊವ್ನ್ ಹೊತ್ತ್ಯಾ ತಾಂಡ್ಯಾಚ್ಯಾ ಲೊಕಾನಿ ಯೆವ್ನ್ ಮಾಕಾ ಸಾಕ್ಷಿ ದಿಲ್ಯಾನಿ ಹೆಚ್ಯಾ ವೈನಾ ಖುಶಿ ಹೊಲಿ . ಅಧ್ಯಾಯವನ್ನು ನೋಡಿ |
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.