ಅಪೊಸ್ತಲರ ಕೃತ್ಯಗಳು 1:15 - ಪರಿಶುದ್ದ ಬೈಬಲ್15 ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾಚ್ ದಿಸಾತ್ನಿ ಸುಮಾರ್ ಎಕ್ಸೆವಿಸ್ ಜನಾ ವಿಶ್ವಾಸಾತ್ ಹೊತ್ತಿ ಲೊಕಾ ಜಮಲ್ಲ್ಯಾ ಎಳಾರ್ ಪೆದ್ರು ತೆಂಚ್ಯಾ ಮದ್ದಿ ಇಬೆ ರ್‍ಹಾವ್ನ್ ಅಶೆ ಮನುಕ್ ಲಾಗ್ಲೊ, ಅಧ್ಯಾಯವನ್ನು ನೋಡಿ |
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.