ಅಪೊಸ್ತಲರ ಕೃತ್ಯಗಳು 1:18 - ಪರಿಶುದ್ದ ಬೈಬಲ್18 (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 (ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹ್ಯಾ ಮಾನ್ಸಾನ್ ಅಪ್ನಾಚ್ಯಾ ಖೊಟ್ಯಾ ಕಾಮಾನ್ ಕಮ್ವಲ್ಲ್ಯಾ ಪೈಸ್ಯಾನ್ ಎಕ್ ಸೆತ್ ಇಕಾತ್ ಘೆಟ್ಲ್ಯಾನ್, ತ್ಯಾತುರ್ ತೊಂಡಾನಿ ಪಡುನ್ ತೆಚೆ ಪೊಟ್ ಫುಟ್ಲೆ ಅನಿ ತೆಚಿ ಸಗ್ಳಿ ಅಂತ್ಡಾ ಭಾಯ್ರ್ ಪಡ್ಲಿ. ಅಧ್ಯಾಯವನ್ನು ನೋಡಿ |