Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:5 - ಪರಿಶುದ್ದ ಬೈಬಲ್‌

5 ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಜುವಾಂವಾನ್ ಪಾನಿಯಾನ್ ಬಾಲ್ತಿಮ್ ದಿಲ್ಯಾನ್, ಖರೆ ಅನಿ ಎಕ್ ಉಲ್ಲ್ಯಾ ದಿಸಾನಿ ತುಮ್ಕಾ ಪವಿತ್ರ್ ಆತ್ಮ್ಯಾನಿ ಬಾಲ್ತಿಮ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:5
16 ತಿಳಿವುಗಳ ಹೋಲಿಕೆ  

“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.


ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.


ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ಯೋಹಾನನು, “ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನಿಮಗೆ ಗೊತ್ತಿಲ್ಲದ ಒಬ್ಬನು ಇಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು