ಅಪೊಸ್ತಲರ ಕೃತ್ಯಗಳು 1:8 - ಪರಿಶುದ್ದ ಬೈಬಲ್8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಪವಿತ್ರ್ ಆತ್ಮೊ ತುಮ್ಚ್ಯಾ ವರ್‍ತಿ ಯೆತಾ ತನ್ನಾ ತುಮ್ಕಾ ಬಳ್ ಗಾವ್ತಾ. ಮಾನಾ ಜೆರುಜಲೆಮಾಕ್ ,ಸಗ್ಳ್ಯಾ ಜುದೆಯ್ ಪ್ರಾಂತ್ಯಾತ್ ಅನಿ ಸಮರ್ಯಾತ್ ಅನಿ ಜಗಾಚ್ಯಾ ಆಕ್ರಿ ಪತರ್ಬಿ ತುಮಿ ಮಾಕಾ ಸಾಕ್ಷಿ ಹೊವ್ನ್ ರ್‍ಹಾತ್ಯಾಶಿ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.