ಅಪೊಸ್ತಲರ ಕೃತ್ಯಗಳು 1:9 - ಪರಿಶುದ್ದ ಬೈಬಲ್9 ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಜೆಜುನ್ ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ತೆನಿ ಬಗುನ್ಗೆತ್ ರ್‍ಹಾತಾನಾಚ್ ತೆಕಾ ವೈರ್ ಉಕ್ಲುನ್ ನ್ಹೆವ್ನ್ ಹೊಲೆ ಅನಿ ತೆಂಚ್ಯಾ ಡೊಳ್ಯಾಂಚ್ಯಾ ಇದ್ರಾಕ್ನಾ ತೆಕಾ ಮೊಡಾನ್ ನಿಪ್ವುಲ್ಯಾನ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.