17 ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
17 ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,
17 ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು -
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.
ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.
ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.