Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:19 - ಪರಿಶುದ್ದ ಬೈಬಲ್‌

19 ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪೆದ್ರು ತ್ಯಾ ದರ್ಶನಾಚ್ಯಾ ವಿಶಯಾತ್ ಅಜುನ್ ಬಿ ಯವ್ಜುನ್ಗೆತ್ ಹೊತ್ತೊ, ಖರೆ ಪವಿತ್ರ್ ಆತ್ಮ್ಯಾನ್ ತೆಕಾ, ಸಿಮಾವ್ ತುಕಾ ಹುಡ್ಕುಂಗೆತ್ ತಿನ್ ಲೊಕಾ ಯೆಲಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:19
11 ತಿಳಿವುಗಳ ಹೋಲಿಕೆ  

ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.


ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


“ಸೀಮೋನ್ ಪೇತ್ರನು ಇಲ್ಲಿ ವಾಸವಾಗಿರುವನೇ?” ಎಂದು ಕೇಳಿದರು.


ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು