ಅಪೊಸ್ತಲರ ಕೃತ್ಯಗಳು 10:2 - ಪರಿಶುದ್ದ ಬೈಬಲ್2 ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಹ್ಯೊ ಕೊರ್ನೆಲ್ ದೆವಸ್ಪಾನಾಚೊ ಮಾನುಸ್ ಹೊವ್ನ್ ಹೊತ್ತೊ, ತೊ ಅನಿ ತೆಚ್ಯಾ ಘರಾತ್ಲಿ ಸಗ್ಳಿ ಲೊಕಾ ದೆವಾಕ್ ಆರಾದನ್ ಕರಿತ್, ತೊ ಬರ್‍ಯಾ ಮನಾನ್ ಗರಿಬಾಕ್ನಿ ದಾನ್ ಧರ್ಮ್ ಕರಿತ್ ಹೊತ್ತೊ, ಅನಿ ಕನ್ನಾಬಿ ದೆವಾಕ್ಡೆ ಮಾಗ್ನಿ ಕರಿತ್ ರ್‍ಹಾಯ್. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.