ಅಪೊಸ್ತಲರ ಕೃತ್ಯಗಳು 10:24 - ಪರಿಶುದ್ದ ಬೈಬಲ್24 ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮರುದಿನ ಅವನು ಕೈಸರೈಯಕ್ಕೆ ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಪ್ರಾಣವಿುತ್ರರನ್ನೂ ಕೂಡ ಕರಿಸಿ ಪೇತ್ರನನ್ನು ಎದುರುನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ದುಸ್ರ್ಯಾಂದಿಸಿ ತೆನಿ ಸೆಜಾರೆಯ್ ಮನ್ತಲ್ಯಾ ಶಾರಾಕ್ ಪಾವ್ಲೆ ಕೊರ್ನೆಲ್ ತೆಂಚ್ಯಾಸಾಟ್ನಿ ರಾಕುನ್ಗೆತ್ ಹೊತ್ತೊ, ತೆನಿ ಅಪ್ಲ್ಯಾ ಬಳ್ಗಾಚ್ಯಾ ಲೊಕಾಕ್ನಿ ಅನಿ ಜಗೊಳ್ಲ್ಯಾ ವಾಂಗ್ಡಿಯಾಕ್ನಿ ತನ್ನಾಚ್ ಅಪ್ಲ್ಯಾ ಘರಾಕ್ ಬಲ್ವುಲ್ಯಾನ್. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.