Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:27 - ಪರಿಶುದ್ದ ಬೈಬಲ್‌

27 ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನೊಂದಿಗೆ ಮಾತನಾಡುತ್ತಾ ಪೇತ್ರನು ಮನೆಯೊಳಗೆ ಹೋಗಿ ಅಲ್ಲಿ ಜನರ ದೊಡ್ಡ ಗುಂಪೇ ಇರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಪೆದ್ರುನ್ ಕೊರ್ನೆಲಾಚ್ಯಾ ವಾಂಗ್ಡಾ ಅನಿಬಿ ಬೊಲುನ್ಗೆತ್ ಭುತ್ತುರ್ ಗೆಲ್ಯಾ ತನ್ನಾ ಥೈ ಗೊಳಾ ಹೊಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:27
7 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.


‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.


ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು