ಅಪೊಸ್ತಲರ ಕೃತ್ಯಗಳು 10:28 - ಪರಿಶುದ್ದ ಬೈಬಲ್28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ. ಅಧ್ಯಾಯವನ್ನು ನೋಡಿ |