Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:3 - ಪರಿಶುದ್ದ ಬೈಬಲ್‌

3 ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮಧ್ಯಾಹ್ನದ ಮೇಲೆ ಸುಮಾರು ಮೂರು ಗಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು - ಕೊರ್ನೇಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಎಕ್ ದಿಸಿ ದೊಪರಾಕ್ಡೆ ಸುಮಾರ್ ತಿನ್ ಗಂಟೆ ಹೊಲ್ಲ್ಯಾ ತನ್ನಾ ಕೊರ್ನೆಲಾಕ್ ಎಕ್ ದರ್ಶನ್ ದಿಸ್ಲೆ, ದೆವಾಚೊ ದುತ್ ಎಕ್ಲೊ ತೆಚ್ಯಾ ಜಗ್ಗೊಳ್ ಯೆವ್ನ್ “ಕೊರ್ನೆಲಾ” ಮನುನ್ ಬಲ್ವುತಲೆ ತೆಕಾ ಚೊಕ್ಕ್ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:3
23 ತಿಳಿವುಗಳ ಹೋಲಿಕೆ  

ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.


ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.


ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.


ಈ ದರ್ಶನದ ಬಗ್ಗೆ ಪೇತ್ರನು ಇನ್ನೂ ಆಲೋಚಿಸುತ್ತಿದ್ದನು. ಆದರೆ ಪವಿತ್ರಾತ್ಮನು ಅವನಿಗೆ, “ಇಗೋ, ನಿನ್ನನ್ನು ಮೂರು ಜನರು ಹುಡುಕುತ್ತಾ ಬಂದಿದ್ದಾರೆ.


ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,


ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.


ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.


ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,


ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.


ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.


ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.


ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!


ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು