Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:36 - ಪರಿಶುದ್ದ ಬೈಬಲ್‌

36 ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ದೆವಾನ್ ಇಸ್ರಾಯೆಲ್‌ಕಾರಾಕ್ನಿ ಅಪ್ಲಿ ಬರಿ ಖಬರ್ ಧಾಡುನ್ ದಿಲ್ಯಾನ್ ಅನಿ ಜೆಜು ಕ್ರಿಸ್ತಾಕ್ನಾ ಬರಿ ಖಬರ್ ಪರ್ಗಟ್ ಕರ್‍ಲ್ಯಾನ್, ತೊ ಸಗ್ಳ್ಯಾಂಚೊ ಧನಿಯಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:36
57 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


“ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


“ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.


ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.


ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”


“ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು