Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:37 - ಪರಿಶುದ್ದ ಬೈಬಲ್‌

37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಗಲಿಲಾಯಾತ್ ಶುರು ಹೊವ್ನ್ ಜುವಾಂವಾಕ್ ಬಾಲ್ತಿಮಾಚ್ಯಾ ವಿಶಯಾತ್ ಪರ್ಗಟ್ ಕರಲ್ಯಾ ಮಾನಾ ಜುದೆಯಾತ್ ಕಾಯ್ ಹೊಲೆ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:37
16 ತಿಳಿವುಗಳ ಹೋಲಿಕೆ  

ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.


ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು