Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:38 - ಪರಿಶುದ್ದ ಬೈಬಲ್‌

38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:38
40 ತಿಳಿವುಗಳ ಹೋಲಿಕೆ  

“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.


ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.


ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.


ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.


“ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ಆದ್ದರಿಂದ ಯೇಸು ಎದ್ದು ಅಧಿಕಾರಿಯ ಸಂಗಡ ಹೋದನು. ಯೇಸುವಿನ ಶಿಷ್ಯರು ಸಹ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು