Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:40 - ಪರಿಶುದ್ದ ಬೈಬಲ್‌

40 ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ಥಾನಗೊಳಿಸಿ ಪ್ರತ್ಯಕ್ಷರಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆತನನ್ನು ಮರದ ಕಂಬಕ್ಕೆ ತೂಗಹಾಕಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ, ದೆವಾನ್ ತೆಕಾ ಮರ್ನಾಕ್ನಾ ತಿನ್ವೆ ದಿಸಾತ್ ಝಿತ್ತೊ ಕರುನ್ ಉಟ್ವುಲ್ಯಾನ್! ಜೆಜು ಪ್ರತ್ಯೆಕ್ಷ್ ದಿಸಿ ಸಾರ್ಕೊ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:40
16 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು