ಅಪೊಸ್ತಲರ ಕೃತ್ಯಗಳು 10:42 - ಪರಿಶುದ್ದ ಬೈಬಲ್42 “ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಲೊಕಾಕ್ನಿ ಶಿಕಾಪಾ ಕರುಚೆ ಮನುನ್ ಜೆಜುನ್ ಅಮ್ಕಾ ಸಾಂಗಲ್ಯಾನ್, ಝಿತ್ತೆ ಹೊತ್ತ್ಯಾ ಲೊಕಾಕ್ನಿಬಿ ಅನಿ ಮರುನ್ ಗೆಲ್ಲ್ಯಾ ಲೊಕಾಕ್ನಿ ಬಿ ದೆವಾಕ್ನಾ ನಾಯ್ಯಾಧಿಪತಿ ಹೊಲ್ಲೊ ಮಾನುಸ್ ಅಪ್ನಿಚ್ ಮನ್ತಲೆ ಲೊಕಾಕ್ನಿ ಕಳ್ವು ಮನುನ್ ಅಮ್ಕಾ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |