ಅಪೊಸ್ತಲರ ಕೃತ್ಯಗಳು 10:45 - ಪರಿಶುದ್ದ ಬೈಬಲ್45 ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45-46 ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45-46 ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಪೆದ್ರುಚ್ಯಾ ವಾಂಗ್ಡಾ ಯೆಲ್ಲಿ ಜೊಪ್ಪಾ ಮನ್ತಲ್ಯಾ ಗಾಂವಾತ್ಲಿ ಜುದೆವ್ ವಿಶ್ವಾಸಿ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿಬಿ ಪವಿತ್ರ್ ಆತ್ಮೊ ಯೆಲ್ಲೆ ಬಗುನ್ ತೆನಿ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿ |