Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:47 - ಪರಿಶುದ್ದ ಬೈಬಲ್‌

47 “ನೀರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳದಂತೆ ನಾವು ಈ ಜನರಿಗೆ ಅಡ್ಡಿಮಾಡಲು ಸಾಧ್ಯವಿಲ್ಲ. ನಾವು ಹೊಂದಿಕೊಂಡಂತೆ ಇವರೂ ಪವಿತ್ರಾತ್ಮನನ್ನು ಹೊಂದಿಕೊಂಡರು!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ನೀರಿನ ದೀಕ್ಷಾಸ್ನಾನವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 “ಪಾನಿಯಾತ್ ಬಾಲ್ತಿಮ್ ಕರುನ್ ಘೆಯ್ನಾ ಸಾರ್ಕೆ ಹೆಂಕಾ ಅಡ್ಕಳ್ ಕರುಕ್ ಕೊನಾಚೆನ್ಬಿ ಹೊಯ್ಲ್ ಕಾಯ್? ಅಮಿ ಮಾನುನ್ ಘೆಟಲ್ಯಾ ಸಾರ್ಕೆಚ್ ಹೆನಿಬಿ ಪವಿತ್ರ್ ಆತ್ಮ್ಯಾಕ್ ಮಾನುನ್ ಘೆಟ್ಲ್ಯಾನಿ!” ಮನುನ್ ಸಾಂಗುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:47
9 ತಿಳಿವುಗಳ ಹೋಲಿಕೆ  

ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು