Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:8 - ಪರಿಶುದ್ದ ಬೈಬಲ್‌

8 ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಡೆದುದೆಲ್ಲವನ್ನೂ ತಿಳಿಸಿ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕೊರ್ನೆಲಾನ್ ತೆಂಕಾ ಹರ್ ಎಕ್‍ಬಿ ವಿವರನ್ ಕರ್‍ಲ್ಯಾನ್, ಅನಿ ತೆಂಕಾ ಜೊಪ್ಪಾಕ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:8
11 ತಿಳಿವುಗಳ ಹೋಲಿಕೆ  

ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.


ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.


ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು