ಅಪೊಸ್ತಲರ ಕೃತ್ಯಗಳು 11:1 - ಪರಿಶುದ್ದ ಬೈಬಲ್1 ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿದರೆಂಬ ವಾರ್ತೆಯನ್ನು ಅಪೊಸ್ತಲರೂ ಯೂದಾಯದಲ್ಲೆಲ್ಲಾ ಇದ್ದ ಸಹೋದರರೂ ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅಪೊಸ್ತಲಾಕ್ನಿ ಅನಿ ಜುದೆಯೆತ್ಲ್ಯಾ ಭಾವಾಕ್ನಿಬಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾನಿ ದೆವಾಚಿ ಗೊಸ್ಟಿಯಾ ಮಾನುನ್ ಘೆಟ್ಲ್ಯಾನಿ ಮನ್ತಲೆ ಕಳುನ್ ಯೆಲೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.