Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:18 - ಪರಿಶುದ್ದ ಬೈಬಲ್‌

18 ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವಾತ್ಲ್ಯಾ ದೆವಾಚ್ಯಾ ಲೊಕಾನಿ ಹಿ ಸಂಗ್ತಿಯಾ ಆಯ್ಕಲ್ಲ್ಯಾ ಮಾನಾ ವಾದ್ ಕರ್‍ತಲೆ ಬಂದ್ ಕರುನ್ ದೆವಾಕ್ ಸ್ತುತಿ ಕರುಂಗೆತ್ “ತಸೆ ಹೊಲ್ಯಾರ್ ಅಮ್ಚ್ಯಾ ಬಾಸೆನ್ ಅಪ್ಲಿ ಮನಾ ಬದ್ಲುನ್ ಘೆವ್ನ್ ಜಿವ್ ಘೆವ್ಕ್ ಸಾಟ್ನಿ ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿಬಿ ಅವಾಕಾಸ್ ದಿಲ್ಯಾನ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:18
33 ತಿಳಿವುಗಳ ಹೋಲಿಕೆ  

ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಯಾಜಕನಾದ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳು ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಮಾತುಗಳನ್ನು ಕೇಳಿದರು. ಇವರು ಹೇಳುತ್ತಿರುವುದು ಸತ್ಯ ಎಂದು ಅವರಿಗೆ ಮನದಟ್ಟಾಯಿತು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು