Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:19 - ಪರಿಶುದ್ದ ಬೈಬಲ್‌

19 ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸ್ತೆಪನಾಕ್ ಜಿವಾನಿ ಮಾರುನ್ ಹೊಲ್ಲ್ಯಾ ಮಾನಾ ಯೆಲ್ಲ್ಯಾ ತರಾಸಾನಿ ದೆವಾಚಿ ಲೊಕಾ ಸಗ್ಳಿ ಪಗ್ಳುನ್ ಗೆಲ್ಲಿ, ದೆವಾಚ್ಯಾ ಲೊಕಾತ್ನಿ ಥೊಡಿ ಲೊಕಾ ಪೊಯಿನಿಕ್ಯಾ, ಸಿಪ್ರ್ ಅನಿ ಅಂತಿಯೊಕ್ಯ್ ಮನ್ತಲ್ಯಾ ಲೈ ಧುರ್‍ಲ್ಯಾ ಗಾಂವಾತ್ನಿ ಗೆಲೆ, ದೆವಾಚ್ಯಾ ಲೊಕಾನಿ ಹ್ಯಾ ಗಾಂವಾತ್ನಿ ದೆವಾಚಿ ಬರಿ ಖಬರ್ ಕಳ್ವುಲ್ಯಾನಿ ಖರೆ ತೆನಿ ಜುದೆವಾಕ್ನಿ ಎವ್ಡೆಚ್ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:19
22 ತಿಳಿವುಗಳ ಹೋಲಿಕೆ  

ಫೆನಿಷ್ಯಕ್ಕೆ ಹೋಗುವ ಹಡಗನ್ನು ನಾವು ಅಲ್ಲಿ ಕಂಡೆವು. ನಾವು ಆ ಹಡಗನ್ನೇರಿ ಪ್ರಯಾಣ ಮಾಡಿದೆವು.


ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.


ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು.


ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,


ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)


ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.


ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.


ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು