Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:2 - ಪರಿಶುದ್ದ ಬೈಬಲ್‌

2 ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು ಅವನೊಂದಿಗೆ ವಾದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಪೇತ್ರನು ಯೆರೂಸಲೇವಿುಗೆ ಬಂದಾಗ ಸುನ್ನತಿಯವರು - ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಅವನ ಕೂಡ ವಿವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಪೇತ್ರನು ಯೆರೂಸಲೇಮಿಗೆ ಹೋದಾಗ ಸುನ್ನತಿಯಾದವರು ಅವನೊಂದಿಗೆ ವಾಗ್ವಾದಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಪೆದ್ರು ಜೆರುಜಲೆಮಾಕ್ ಯೆಲ್ಲ್ಯಾ ತನ್ನಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸುನ್ನತ್ ಹೊವ್ಕುಚ್ ಪಾಜೆ ಮನುನ್ ಚಿಂತ್ತಲ್ಯಾ ಲೊಕಾನಿ ತೆಚ್ಯಾ ವಾಂಗ್ಡಾ ಚರ್ಚಾ ಕರುನ್ಗೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:2
8 ತಿಳಿವುಗಳ ಹೋಲಿಕೆ  

ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.


ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು